ನಾಳೆಯಿಂದ ಪ್ಲವ ನಾಮ ಸಂವತ್ಸರ ಆರಂಭ.
ಸಂವತ್ಸರದ ಮೊದಲ ಹಬ್ಬ.
ಹಬ್ಬವನ್ನಾಚರಿಸಿ,ಲೋಕಕ್ಕೆ ಒಳಿತಾಗಲಿ ಎಂದು ಭಗವಂತನನ್ನು ಪ್ರಾರ್ಥಿಸೋಣ
*ಶ್ರೀಪ್ಲವನಾಮ ಸಂವತ್ಸರದ ಯುಗಾದಿಯ ಶುಭಾಶಯಗಳು.
ಶತಾಯುರ್ವಜ್ರ ದೇಹಾಯ
ಸರ್ವ ಸಂಪತ್ಕರಾಯ ಚ |
ಸರ್ವಾರಿಷ್ಟ ವಿನಾಶಾಯ
ನಿಂಬಕಂ ದಳ ಭಕ್ಷಣಂ ||
ಯುಗಾದಿಯ ದಿನ ಪಂಚಾಂಗಕ್ಕೆ ಪೂಜೆ ಮಾಡಿ,
ಮೇಲಿನ ಶ್ಲೋಕ ಹೇಳಿ ಬೇವು ಬೆಲ್ಲ ಸವಿಯಬೇಕು.
ಈಸಂವತ್ಸರದಲ್ಲಿ ನಿಮಗೆಲ್ಲರಿಗೂ ಬೇವಿಗಿಂತಲೂ,ಸಿಹಿಯ ಬೆಲ್ಲದ ಸವಿ ಫಲಗಳೇ ಲಭಿಸಲಿ.
ಸರ್ವೇವೈ ಸುಖಿನಸ್ಸಂತು
ಸರ್ವೇಸಂತು ನಿರಾಮಯಾಃ |
ಸರ್ವೇ ಭದ್ರಾಣಿ ಪಶ್ಯಂತು
ಮಾ ಕಶ್ಚಿದ್ದುಃಖಭಾಗ್ಭವೇತ್ ||
ಎಲ್ಲರೂ ಸುಖವಾಗಿರಲಿ.
ಎಲ್ಲರೂ ಕಷ್ಟ-ತಾಪತ್ರಯಗಳಿಲ್ಲದೆ ನೆಮ್ಮದಿಯಿಂದ ಇರುವಂತಾಗಲಿ.
ಎಲ್ಲರಿಗೂ ಎಲ್ಲೆಡೆಗಳಿಂದ ಮಂಗಳಕರವಾದ ಒಳಿತೇ ಕಾಣಿಸಲಿ.
ಯಾರೊಬ್ಬರೂ ದುಃಖಭಾಗಿಗಳಾಗದಿರಲಿ.
ಕಾಲೇ ವರ್ಷಂತು ಪರ್ಜನ್ಯಃ
ಪೃಥಿವೀ ಸಸ್ಯ ಶಾಲಿನೀ |
ದೇಶೋsಯಂ ಕ್ಷೋಭ ರಹಿತಃ
ಸಾತ್ವಿಕಾಃ ಸಂತು ನಿರ್ಭಯಾಃ ||
ಎಲ್ಲರಿಗೂ ಮತ್ತೊಮ್ಮೆ
ನೂತನ ಶ್ರೀ ಪ್ಲವ ನಾಮ ಸಂವತ್ಸರದ ಹಾರ್ದಿಕ ಶುಭಾಶಯಗಳು.
0 Comments